•  
  •  
  •  
  •  
Index   ವಚನ - 228    Search  
 
ಇನ್ನು ನಿರಂಜನಾತೀತಪ್ರಣವ ಮೊದಲಾಗಿ ಬ್ರಹ್ಮ ಕಡೆಯಾಗಿ ಸೃಷ್ಟಿಮಾರ್ಗವ ಹೇಳುತ್ತಿದ್ದೆನು. ಅದೆಂತೆಂದೊಡೆ: ಆದಿಮೂಲ ಅನಾದಿಮೂಲಂಗಳಿಗತ್ತತ್ತವಾದ ಮಹಾಮೂಲಸ್ವಾಮಿಯ ಮೀರಿದ ಅತಿಮಹಾಮೂಲಸ್ವಾಮಿಗತ್ತತ್ತವಾಗಿಹ ಅಖಂಡ ಮಹಾಮೂಲಸ್ವಾಮಿಯ ನೆನಹುಮಾತ್ರದಲ್ಲಿಯೇ ನಿರಂಜನಾತೀತಪ್ರಣವ ಉತ್ಪತ್ತ್ಯವಾಯಿತ್ತು. ಆ ನಿರಂಜನಾತೀತಪ್ರಣವದ ನೆನಹುಮಾತ್ರದಲ್ಲಿಯೇ ನಿರಂಜನಪ್ರಣವ ಉತ್ಪತ್ತ್ಯವಾಯಿತ್ತು. ಆ ನಿರಂಜನಪ್ರಣವದ ನೆನಹುಮಾತ್ರದಲ್ಲಿಯೇ ಅವಾಚ್ಯಪ್ರಣವ ಉತ್ಪತ್ತ್ಯವಾಯಿತ್ತು. ಆ ಅವಾಚ್ಯಪ್ರಣವದ ನೆನಹುಮಾತ್ರದಲ್ಲಿಯೇ ಕಲಾಪ್ರಣವ ಉತ್ಪತ್ತ್ಯವಾಯಿತ್ತು. ಆ ಕಲಾಪ್ರಣವದ ನೆನಹುಮಾತ್ರದಲ್ಲಿಯೇ ಅನಾದಿಪ್ರಣವ ಉತ್ಪತ್ತ್ಯವಾಯಿತ್ತು. ಆ ಅನಾದಿಪ್ರಣವದ ನೆನಹುಮಾತ್ರದಲ್ಲಿಯೇ ಅನಾದಿ ಅಕಾರ ಉಕಾರ ಮಕಾರ ಉತ್ಪತ್ತ್ಯವಾಯಿತ್ತು. ಆ ಅನಾದಿ ಅಕಾರ ಉಕಾರ ಮಕಾರದ ನೆನಹುಮಾತ್ರದಲ್ಲಿಯೇ ಆದಿಪ್ರಣವ ಉತ್ಪತ್ತ್ಯವಾಯಿತ್ತು. ಆ ಆದಿಪ್ರಣವದ ನೆನಹುಮಾತ್ರದಲ್ಲಿಯೇ ಆದಿ ಅಕಾರ ಉಕಾರ ಮಕಾರ ಉತ್ಪತ್ತ್ಯವಾಯಿತ್ತು ನೋಡಾ. ಇದಕ್ಕೆ ಚಕ್ರಾತೀತಾಗಮೇ: ``ನಿರಂಜನಾತೀತಚಿಂತಾಯಾಂ ಅನಾದ್ಯೋಂಕಾರ ಸಂಭವಃ | ನಿರಂಜನಸ್ಯ ಚಿಂತಾಯಾಂ ಅವಾಚ್ಯಂ ನಾಮ ಜಾಯತೇ | ಅವಾಚ್ಯೋಂಕಾರ ಚಿಂತಾಯಾಂ ಕಲಾ ನಾಮ ಸಮುದ್ಭವಃ | ಕಲಾಪ್ರಣವಚಿಂತಾಯಾಂ ಅನಾದಿಪ್ರಣವೋ ಭವೇತ್ || ಅನಾದಿಪ್ರಣವ ಚಿಂತಾಯಾಂ ಆದಿ ಮಾತ್ರಸ್ಯ ಸಂಭವಃ | ಆದಿ ಮಾತ್ರಸ್ಯ ಚಿಂತಾಯಾಂ ಆದಿ ಪ್ರಣವಸಂಭವಃ | ಆದಿಪ್ರಣವಚಿಂತಾಯಾಂ ಅಕ್ಷರತ್ರಯಮುದ್ಗತಂ ||'' ಇಂತೆಂದುದಾಗಿ, ಇದಕ್ಕೆ ಅಥರ್ವಣವೇದ: ಓಂ ನಿರಂಜನಾತೀತಪ್ರಣವಾಖ್ಯಾ ನಿರಂಜನ ಪ್ರಣವ ಜಾಯತೇ | ನಿರಂಜನಪ್ರಣವ ತದಸ್ಯ ಅವಾಚ್ಯೋಂಕಾರ ಜಾಯತೇ | ಅವಾಚ್ಯೋಂಕಾರ ಚಿಂತಾಖ್ಯಾಂ ಕಲಾಪ್ರಣವಸ್ಯ ಜಾಯತೇ | ಕಲಾಪ್ರಣವಸ್ಯ ತದಸ್ಯ ಅನಾದ್ಯೋಂಕಾರ ಜಾಯತೇ | ಅನಾದ್ಯೋಂಕಾರಚಿಂತಾಯಾಂ ಅನಾದಿತ್ರ್ಯಕ್ಷರೋ ಜಾಯತೇ | ಅನಾದ್ಯರಕ್ಷರ ಚಿಂತಾಯಾಂ ಆದಿಪ್ರಣವ ಜಾಯತೇ | ಆದಿ ಪ್ರಣವಚಿಂತಾಯಾಂ ಅಕ್ಷರತ್ರಯಂ ಜಾಯತೇ ||'' ಇಂತೆಂದು ಶ್ರುತಿ, ಅಪ್ರಮಾಣಕೂಡಲಸಂಗಮದೇವಾ.
Transliteration Innu niran̄janātītapraṇava modalāgi brahma kaḍeyāgi sr̥ṣṭimārgava hēḷuttiddenu. Adentendoḍe: Ādimūla anādimūlaṅgaḷigattattavāda mahāmūlasvāmiya mīrida atimahāmūlasvāmigattattavāgiha akhaṇḍa mahāmūlasvāmiya nenahumātradalliyē niran̄janātītapraṇava utpattyavāyittu. Ā niran̄janātītapraṇavada nenahumātradalliyē niran̄janapraṇava utpattyavāyittu. Ā niran̄janapraṇavada nenahumātradalliyē avācyapraṇava utpattyavāyittu. Ā avācyapraṇavada nenahumātradalliyē kalāpraṇava utpattyavāyittu. Ā kalāpraṇavada nenahumātradalliyē anādipraṇava utpattyavāyittu. Ā anādipraṇavada nenahumātradalliyē anādi akāra ukāra makāra utpattyavāyittu. Ā anādi akāra ukāra makārada nenahumātradalliyē ādipraṇava utpattyavāyittu. Ā ādipraṇavada nenahumātradalliyē ādi akāra ukāra makāra utpattyavāyittu nōḍā. Idakke cakrātītāgamē: ``Niran̄janātītacintāyāṁ anādyōṅkāra sambhavaḥ | niran̄janasya cintāyāṁ avācyaṁ nāma jāyatē | avācyōṅkāra cintāyāṁ kalā nāma samudbhavaḥ | kalāpraṇavacintāyāṁ anādipraṇavō bhavēt || anādipraṇava cintāyāṁ ādi mātrasya sambhavaḥ | ādi mātrasya cintāyāṁ ādi praṇavasambhavaḥ | ādipraṇavacintāyāṁ akṣaratrayamudgataṁ ||'' intendudāgi, Idakke atharvaṇavēda: Ōṁ niran̄janātītapraṇavākhyā niran̄jana praṇava jāyatē | niran̄janapraṇava tadasya avācyōṅkāra jāyatē | avācyōṅkāra cintākhyāṁ kalāpraṇavasya jāyatē | kalāpraṇavasya tadasya anādyōṅkāra jāyatē | anādyōṅkāracintāyāṁ anāditryakṣarō jāyatē | anādyarakṣara cintāyāṁ ādipraṇava jāyatē | ādi praṇavacintāyāṁ akṣaratrayaṁ jāyatē ||'' intendu śruti, apramāṇakūḍalasaṅgamadēvā.