ಎಡಬಲವೆಂದೇನೊ ನಿಮ್ಮ ಅಡಿಗಳನರಿದವಂಗೆ?
ಕಡೆ ನಡುವೆಂದೇನೊ ಮೃಡನ ಹಾಡುವಂಗೆ?
ಕುಲಛಲವೆಂದೇನೊ ಮನದ ಹೊಲೆಯ ಕಳೆದವಂಗೆ?
ತಲೆಕಾಲೆಂದೇನೊ ಮಾಯೆಯ ಬಲೆಯ ನುಸುಳಿದವಂಗೆ?
ಕಲಿಯುಗದ ಕತ್ತಲೆಯ ದಾಂಟಿದವಂಗೆ,
ನಿಮ್ಮ ನೆಲೆಯನರಿದ ಶರಣಂಗೆ
ಇನ್ನು ಸ್ಥಲನೆಲೆ ಆವುದುಂಟು ಹೇಳಾ,
ಬಸವಪ್ರಿಯ ಕೂಡಲಚೆನ್ನಬಸವಣ್ಣಾ?
Transliteration Eḍabalavendēno nim'ma aḍigaḷanaridavaṅge?
Kaḍe naḍuvendēno mr̥ḍana hāḍuvaṅge?
Kulachalavendēno manada holeya kaḷedavaṅge?
Talekālendēno māyeya baleya nusuḷidavaṅge?