ಬಸವಣ್ಣ   
  ವಚನ - 3     
 
ಅಯ್ಯಾ, ನೀನು ನಿರಾಕಾರವಾಗಿರ್ದಲ್ಲಿ ನಾನು ಜ್ಞಾನವೆಂಬ ವಾಹನವಾಗಿರ್ದೆ, ಕಾಣಾ. ಅಯ್ಯಾ, ನೀನು ನಾಟ್ಯಕ್ಕೆ ನಿಂದಲ್ಲಿ ನಾನು ಚೈತನ್ಯವೆಂಬ ವಾಹನವಾಗಿರ್ದೆ, ಕಾಣಾ. ಅಯ್ಯಾ, ನೀನು ಆಕಾರವಾಗಿರ್ದಲ್ಲಿ ನಾನು ವೃಷಭನೆಂಬ ವಾಹನವಾಗಿರ್ದೆ, ಕಾಣಾ. ಅಯ್ಯಾ, ನೀನೆನ್ನ ಭವವ ಕೊಂದಹೆನೆಂದು ಜಂಗಮಲಾಂಛನನಾಗಿ ಬಂದಲ್ಲಿ, ನಾನು ಭಕ್ತನೆಂಬ ವಾಹನವಾಗಿರ್ದೆ, ಕಾಣಾ, ಕೂಡಲ ಸಂಗಮದೇವಾ.