ಬಸವಣ್ಣ   
  ವಚನ - 107     
 
ಶಿವಜನ್ಮದಲ್ಲಿ ಹುಟ್ಟಿ, ಲಿಂಗೈಕ್ಯರಾಗಿ, ತನ್ನ ಅಂಗದ ಮೇಲೆ ಲಿಂಗವಿರಲು, ಅನ್ಯರನೆ ಹಾಡಿ, ಅನ್ಯರನೆ ಹೊಗಳಿ, ಅನ್ಯರ ವಚನವ ಕೊಂಡಾಡಲು, ಕರ್ಮ ಬಿಡದು; ಭವಬಂಧನ ! ಶ್ವಾನಯೋನಿಯಲ್ಲಿ ಬಪ್ಪುದು ತಪ್ಪದು !! ಇದು ಕಾರಣ, ಕೂಡಲಸಂಗಮದೇವಾ, ನಿಮ್ಮ ನಂಬಿಯೂ ನಂಬದ ಡಂಭಕರಿಗೆ ಮಳಲ ಗೋಡೆಯನಿಕ್ಕಿ, ನೀರಲ್ಲಿ ತೊಳೆದಂತಾಯಿತ್ತು!