ಬಸವಣ್ಣ   
  ವಚನ - 177     
 
ಸುಪ್ರಭಾತ ಸಮಯದಲ್ಲಿ ಅರ್ತಿಯಲ್ಲಿ ಲಿಂಗವ ನೆನೆದರೆ ತಪ್ಪುವುವು ಅಪಮೃತ್ಯು, ಕಾಲಕರ್ಮಂಗಳಯ್ಯಾ! ದೇವಪೂಜೆಯ ಮಾಟ, ದುರಿತಬಂಧನದೋಟ! ಶಂಭು ನಿಮ್ಮಯ ನೋಟ, ಹೆರೆಹಿಂಗದ ಕಣ್‌ಬೇಟ! ಸದಾ ಸನ್ನಿಹಿತನಾಗಿ ಶರಣೆಂಬುವುದು, ನಂಬುವುದು. ಜಂಗಮಾರ್ಚನೆಯ ಮಾಟ, ಕೂಡಲಸಂಗನ ಕೂಟ!