ಬಸವಣ್ಣ   
  ವಚನ - 197     
 
ಅಗ್ನಿಯಾಧಾರದಲ್ಲಿ ಕಬ್ಬುನ ನೀರುಂಬುದಯ್ಯಾ: ಭೂಮಿಯಾಧಾರದಲ್ಲಿ ವೃಕ್ಷ ನೀರುಂಬುದಯ್ಯಾ; ಜಂಗಮವಾಪ್ಯಾಯನವಾದರೆ ಲಿಂಗ ಸಂತುಷ್ಟಿಯಹುದಯ್ಯಾ: 'ವೃಕ್ಷಸ್ಯ ವದನಂ ಭೂಮಿಃ ಸ್ಥಾವರಸ್ಯತು ಜಂಗಮಃ ಮಮತೃಪ್ತಿರ್ಮಹಾದೇವಿ ಉಭಯೋರ್ಲಿಂಗ ಜಂಗಮಾತ್'! ಇದು ಕಾರಣ ಕೂಡಲಸಂಗಮದೇವರಲ್ಲಿ ಜಂಗಮವಾಪ್ಯಾಯನವಾದರೆ ಲಿಂಗಸಂತುಷ್ಟಿ.