ಬಸವಣ್ಣ   
  ವಚನ - 202     
 
ತನು-ಮನ-ಧನವ ಹಿಂದಿಕ್ಕಿಕೊಂಡು, ಮಾತಿನ ಬಣಬೆಯ ಒಳಲೊಟ್ಟೆಯ ನುಡಿವರು ನೀವೆಲ್ಲಾ ಕೇಳಿರೆ: ತಲಹಿಲ್ಲದ ಕೋಲು ಹೊಳ್ಳು ಹಾರುವುದಲ್ಲದೆ ಗುರಿಯ ತಾಗಬಲ್ಲುದೆ? ಮಾಯಾಪಾಶ ಹಿಂಗಿ, ಮನದ ಗಂಟು ಬಿಡದನ್ನಕ್ಕ ಕೂಡಲಸಂಗಮದೇವನೆಂತೊಲಿವನಯ್ಯಾ?