ಬಸವಣ್ಣ   
  ವಚನ - 219     
 
ಉದಯದ ಮಾಗಿಯ ಬಿಸಿಲು ಅಂಗಕ್ಕೆ ಹಿತವಾಯಿತ್ತು: ಮಧ್ಯಾಹ್ನದ ಬಿಸಿಲು ಅಂಗಕ್ಕೆ ಕರ ಕಠಿಣವಾಯಿತ್ತು! ಮೊದಲಲ್ಲಿ ಲಿಂಗಭಕ್ತಿ ಹಿತವಾಯಿತ್ತು: ಕಡೆಯಲ್ಲಿ ಜಂಗಮಭಕ್ತಿ ಕಠಿಣವಾಯಿತ್ತು! ಇದು ಕಾರಣ ಕೂಡಲಸಂಗಮದೇವನವರ ಬಲ್ಲನಾಗಿ ಒಲ್ಲನಯ್ಯಾ.