ಬಸವಣ್ಣ   
  ವಚನ - 248     
 
ತನಗೆ ಮುನಿವವರಿಗೆ ತಾ ಮುನಿಯಲೇಕಯ್ಯಾ? ತನಗಾದ ಆಗೇನು? ಅವರಿಗಾದ ಚೇಗೇನು? ತನುವಿನ ಕೋಪ ತನ್ನ ಹಿರಿಯತನದ ಕೇಡು; ಮನದ ಕೋಪ ತನ್ನರುಹಿನ ಕೇಡು. ಮನೆಯೊಳಗಣ ಕಿಚ್ಚು ಮನೆಯ ಸುಟ್ಟಲ್ಲದೆ ನೆರೆಮನೆಯ ಸುಡುವುದೆ, ಕೂಡಲಸಂಗಮದೇವಾ?