ಬಸವಣ್ಣ   
  ವಚನ - 262     
 
ದುರ್ವ್ಯಸನಿ ದುರಾಚಾರಿಯೆಂದೆನಿಸದಿರಯ್ಯಾ, ಎನ್ನ. ಲಿಂಗವ್ಯಸನಿ ಜಂಗಮಪ್ರೇಮಿಯೆಂದೆನಿಸಯ್ಯಾ; `ಅವಶ್ಯಮನುಭೋಕ್ತವ್ಯಂ' ಎಂದೆನಿಸದಿರಯ್ಯಾ, ಕೂಡಲಸಂಗಮದೇವಾ, ಸೆರಗೊಡ್ಡಿ ಬೇಡುವೆನು!