ಬಸವಣ್ಣ   
  ವಚನ - 268     
 
ಕಾಣಬಹುದೆ ಪರುಷದ ಗಿರಿಯಂಧಕಂಗೆ? ಅರಿಯಬಹುದೆ ರಸದ ಬಾವಿ ನಿರ್ಭಾಗ್ಯಂಗೆ? ತೆಗೆಯಬಹುದೆ ಕಡವರವು ದರಿದ್ರಂಗೆ? ಕರೆಯಬಹುದೆ ಕಾಮಧೇನುವಶುದ್ಧಂಗೆ? ಹೊನ್ನ ಹುಳುವ ಕಂಡು ನರಿ ತನ್ನ ಬಾಲವ ಹುಣ್ಣು ಮಾಡಿಕೊಂಡರೆ ಹೋಲಬಹುದೆ? ಎನ್ನೊಡೆಯ ಕೂಡಲಸಂಗನ ಶರಣರನು ಪುಣ್ಯವಿಲ್ಲದೆ ಕಾಣಬಹುದೇ?