ಬಸವಣ್ಣ   
  ವಚನ - 290     
 
ಶಬ್ದಸಂಭಾಷಣೆಯ ನುಡಿಯ ವರ್ತಿಸಿ ನುಡಿವೆ: ತೊಡಹದ ಬಣ್ಣದ ಕೆಲಸದಂತೆ ಕಡಿಹಕ್ಕೆ ಒರೆಗೆ ಬಾರದು, ನೋಡಾ! ಎನ್ನ ಮನದಲೊಂದು, ಹೃದಯದಲೊಂದು, ವಚನದಲೊಂದು ನೋಡಾ: ಕೂಡಲಸಂಗಮದೇವಾ, ಆನು ಭಕ್ತನೆಂಬ ಹುಸಿಯ ಮಸಕವನೇನ ಬಣ್ಣಿಸುವೆನಯ್ಯಾ?