ಬಸವಣ್ಣ   
  ವಚನ - 298     
 
ಮುನ್ನೂರರವತ್ತು ದಿನ ಶ್ರವವ ಮಾಡಿ, ಕಳನೇರಿ ಕೈಮರೆದಂತಾಯಿತ್ತೆನ್ನ ಭಕ್ತಿ! ಎನಿಸು ಕಾಲ ಲಿಂಗಾರ್ಚನೆಯ ಮಾಡಿ ಏವೆನಯ್ಯಾ ಮನದಲ್ಲಿ ದೃಢವಿಲ್ಲದನ್ನಕ್ಕ? ಕೊಡನ ತುಂಬಿದ ಹಾಲ ಕೆಡಹಿ, ಉಡುಗಲೆನ್ನಳವೆ ಕೂಡಲಸಂಗಮದೇವಾ?