ಬಸವಣ್ಣ   
  ವಚನ - 325     
 
ಭಕ್ತಿವಿಶೇಷವ ಮಾಡುವರೆ ಹತ್ತು ಬೆರಳುಗಳುಂಟು; ಹಾಸಿ ದುಡಿದರೆ ತನಗುಂಟು, ತನ್ನ ಪ್ರಮಥರಿಗುಂಟು. ಮಾರಿತಂದೆಗಳಂತೆ ಎನಗೇಕಹುದಯ್ಯಾ? ರತ್ನದ ಸಂಕಲೆಯನಿಕ್ಕಿ ಕಾಡಿಹೆ ಕೂಡಲಸಂಗಮದೇವಾ, ಶಿವಧೋ! ಶಿವಧೋ!!