ಬಸವಣ್ಣ   
  ವಚನ - 329     
 
ಆನೆಯು ಆ ದಾರಿಯಲ್ಲಿ ಹೋಯಿತ್ತೆಂದಡೆ, ಆಡೂ ಆ ದಾರಿಯಲ್ಲಿ ಹೋಯಿತ್ತೆನ್ನಬಹುದೆ? ಸಂಗನ ಶರಣರಿಗೆ ಆನು ಸರಿಯೆಂದು ಗಳಹಲು ಬಹುದೆ? ಜಂಗಮಕ್ಕೆ ಮಾಡುವ ಭಕ್ತರಿಗೆ ಆನು ಸರಿಯೆ? ಹೇಳಾ, ಕೂಡಲಸಂಗಮದೇವಾ.