ಬಸವಣ್ಣ   
  ವಚನ - 334     
 
ಮರದ ನೆಳಲಲಿದ್ದು ತನ್ನ ನೆಳಲನರಸಬಹುದೆ? ನಿಮ್ಮ ಶರಣರ ಮುಂದೆ ನಾನೇತರ ಭಕ್ತನಯ್ಯಾ? ನಿಮ್ಮ ಶರಣರ ಮುಂದೆ ನಾನೇತರ ಯುಕ್ತನಯ್ಯಾ? ಆನು ಭಕ್ತನೆಂಬ ನುಡಿ ಸುಡದೆ, ಕೂಡಲಸಂಗಮದೇವಾ?