ಬಸವಣ್ಣ   
  ವಚನ - 351     
 
ಹಿರಿಯಯ್ಯ ಶ್ವಪಚಯ್ಯ, ಕಿರಿಯಯ್ಯ ಡೋಹಾರ ಕಕ್ಕಯ್ಯ. ಅಯ್ಯಗಳಯ್ಯನು ನಮ್ಮ ಮಾದಾರ ಚೆನ್ನಯ್ಯನು ಕೂಡಲಸಂಗಮದೇವಾ, ನಿಮ್ಮ ಶರಣರೊಲಿದೆನ್ನ ಸಲಹುವರಾಗಿ.