ಬಸವಣ್ಣ   
  ವಚನ - 353     
 
ಎನಗಾರೂ ಇಲ್ಲ, ಎನಗಾರೂ ಇಲ್ಲವೆಂಬರು: ಬಾಣನವ ನಾನು, ಮಯೂರನವ ನಾನು, ಕಾಳಿದಾಸನವ ನಾನು! ಕಕ್ಕಯ್ಯ ಹಿರಿಯಯ್ಯ, ಚಿಕ್ಕಯ್ಯ ಚೆನ್ನಯ್ಯ ಎತ್ತಿ ಮುದ್ದಾಡಿ ಸಲಹಿದರೆನ್ನ, ಕೂಡಲಸಂಗಯ್ಯಾ.