ಬಸವಣ್ಣ   
  ವಚನ - 356     
 
ಅರಸರ ಮನೆಯಲ್ಲಿ ಅರಸಿಯಾಗಿಪ್ಪುದರಿಂದ, ಭಕ್ತರ ಮನೆಯಲ್ಲಿ ತೊತ್ತಾಗಿಪ್ಪುದು ಕರ ಲೇಸಯ್ಯಾ: `ತಾರೋ ಅಗ್ಘವಣಿಯ, ನೀಡೋ ಪತ್ರೆಯ, ಲಿಂಗಕ್ಕೆ ಬೋನವ ಹಿಡಿಯೋ' ಎಂಬರು. 'ಕೂಡಲಸಂಗನ ಮಹಾಮನೆಯಲ್ಲಿ ಒಕ್ಕುದನುಣ್ಣೋ ತೊತ್ತೇ' ಎಂಬರು.