ಬಸವಣ್ಣ   
  ವಚನ - 364     
 
ಆಯತ, ಸ್ವಾಯತದನುಭಾವವ ನಾನೆತ್ತ ಬಲ್ಲೆನು? ಲಿಂಗ-ಜಂಗಮಕ್ಕೆ ಮಾಡಿ ನೀಡುವ ಅಚ್ಚ ಶರಣರ ಮನೆಯಲು ಭೃತ್ಯನಾಗಿಪ್ಪೆನಯ್ಯಾ; ಇದು ಕಾರಣ ಕೂಡಲಸಂಗನ ಶರಣರಲ್ಲದೆ ಅನ್ಯವನರಿಯೆನಾಗಿ.