ಬಸವಣ್ಣ   
  ವಚನ - 370     
 
ಜಜ್ಜನೆ ಜರಿದೆನು, ಜಜ್ಜನೆ ಜರಿದೆ, ನೋಡಯ್ಯಾ! ಬಿಬ್ಬನೆ ಬಿರಿದೆನು, ಬಿಬ್ಬನೆ ಬಿರಿದೆ, ನೋಡಯ್ಯಾ! ನಾನೊಬ್ಬನೆ ಉಳಿದೆನು, ನಾನೊಬ್ಬನೆ ಉಳಿದೆ ಕೂಡಲಸಂಗಮದೇವಾ, ನಿಮ್ಮ ಶರಣರನಗಲಿದ ಕಾರಣ!