ಬಸವಣ್ಣ   
  ವಚನ - 374     
 
ಮನೆದೈವ, ಕುಲದೈವ ಎನಗೆ ನಿಮ್ಮವರಯ್ಯಾ! ತನು ಮೀಸಲು, ಮನ ಮೀಸಲು, ನಯನ ಮೀಸಲು ಎನ್ನಾ, ಕೂಡಲಸಂಗಮದೇವಾ, ನಿಮ್ಮ ಶರಣರಿಗೆ.