ಬಸವಣ್ಣ   
  ವಚನ - 400     
 
ಸಮಯೋಚಿತದಲ್ಲಿ ಲಿಂಗಾರ್ಚನೆಯ ಮಾಡುತಿಪ್ಪನಾ ಭಕ್ತನು: ಮಾಡಿದಡೆ ಮಾಡಲಿ: ಮಾಡಿದರೆ ತಪ್ಪೇನು? ಆ ಜಂಗಮದ ಶಬ್ದವ ಕೇಳಿ ಪ್ರಸಾದಕ್ಕೆ ಕೈದುಡುಕಿದರೆ ಅದು ಪ್ರಸಾದವಲ್ಲ: ಕಲ್ಮಷ! ಆ ಸಮಯೋಚಿತದಲ್ಲಿ ಬಂದ ಜಂಗಮದ ಶಬ್ದವ ಕೇಳಿ ಪ್ರಸಾದಕ್ಕೆ ಕೈದೆಗೆದರೆ, ಅದು ಲಿಂಗಕ್ಕೆ ಬೋನ. ಇದು ಕಾರಣ, ಕೂಡಲಸಂಗಮದೇವಾ, ಇಂತಪ್ಪ ಸದಾಚಾರಿಗಳನೆನಗೆ ತೋರಾ.