ಬಸವಣ್ಣ   
  ವಚನ - 404     
 
ಸಂಗಸಹಿತ ಶರಣರು ಬಂದರೆ ನಂಬುವುದೆನ್ನ ಮನವು, ನಚ್ಚುವುದೆನ್ನ ಮನವು. ಹಾವು ನೇಣೆಂಬ ಭ್ರಾಂತುಳ್ಳನ್ನಕ್ಕ ನಾನು ಭಕ್ತನೆಂತಪ್ಪೆನು? ಅಂಗಲಿಂಗ ಸಹಿತವಾಗಿ ಬಂದರೆ, ಸಂಗ ನೀನೆಂದು, ಮತ್ತೆ ಮನದಲ್ಲಿ ಸಂದೇಹ ಹೊಳೆದರೆ ಬೆಂದೆನಲ್ಲಾ ನಾನು, ಕೂಡಲಸಂಗಮದೇವಾ!