ಬಸವಣ್ಣ   
  ವಚನ - 419     
 
ಸ್ಥಾವರಭಕ್ತಂಗೆ ಸೀಮೆಯಲ್ಲದೆ ಘನಲಿಂಗ ಜಂಗಮಕ್ಕೆ ಸೀಮೆಯೆಲ್ಲಿಯದು? ಅಂಬುಧಿಗೆ ಸೀಮೆಯಲ್ಲದೆ ಹರಿವ ನದಿಗೆ ಸೀಮೆಯೆಲ್ಲಿಯದು? ಭಕ್ತಂಗೆ ಸೀಮೆಯಲ್ಲದೆ ಜಂಗಮಕ್ಕೆ ಸೀಮೆಯುಂಟೆ, ಕೂಡಲಸಂಗಮದೇವಾ?