ಬಸವಣ್ಣ   
  ವಚನ - 420     
 
ಎತ್ತಿಕೊಳ್ಳಲೇಕೆ, ಮತ್ತಿಳುಹಲೇಕಯ್ಯಾ? ಧರಧುರ ಭಕ್ತಿಯ ಮಾಡಲೇಕಯ್ಯಾ? ನಿಂದಿಸಲೇಕೆ ಸ್ತುತಿಸಲೇಕೆ? ಹೋಗಬಿಟ್ಟು ಜಂಗಮವ ಹಿಂದೆಯಾಡುವನ ಬಾಯಲಿ ಮೆಟ್ಟಿ ಹುಡಿಹೊಯ್ಯದೆ ಮಾಣ್ಬನೆ ಕೂಡಲಸಂಗಮದೇವಾ?