ಬಸವಣ್ಣ   
  ವಚನ - 453     
 
ದೇವಸಹಿತ ಭಕ್ತ ಮನೆಗೆ ಬಂದರೆ ಕಾಯಕವಾವುದೆಂದು ಬೆಸಗೊಂಡರೆ ನಿಮ್ಮಾಣೆ ! ನಿಮ್ಮ ಪುರಾತರಾಣೆ! ತಲೆದಂಡ! ತಲೆದಂಡ!! ಕೂಡಲಸಂಗಮದೇವಾ, ಭಕ್ತರಲ್ಲಿ ಕುಲವನರಸಿದರೆ ನಿಮ್ಮ ರಾಣಿವಾಸದಾಣೆ!