ಬಸವಣ್ಣ   
  ವಚನ - 476     
 
ತೊತ್ತಿಂಗೆ ಬಲ್ಲಹನೊಲಿದರೆ ಪದವಿಯ ಮಾಡದೆ ಮಾಣ್ಬನೆ? ಜೇಡರ ದಾಸಯ್ಯಂಗೊಲಿದಾತ ಮತ್ತೊಬ್ಬ ದೇವನೆ, ಅಯ್ಯಾ? ಮಾದಾರ ಚೆನ್ನಯ್ಯಂಗೆ, ಡೋಹಾರ ಕಕ್ಕಯ್ಯಂಗೆ, ತೆಲುಗ ಜೊಮ್ಮಯ್ಯಂಗೆ ಒಲಿದಾತ ಮತ್ತೊಬ್ಬ ದೇವನೆ, ಅಯ್ಯಾ? ಎನ್ನ ಮನದ ಪಂಚೇಂದ್ರಿಯ ನಿಮ್ಮತ್ತಲಾದರೆ ತನ್ನತ್ತ ಮಾಡುವ ಕೂಡಲಸಂಗಯ್ಯ.