ಬಸವಣ್ಣ   
  ವಚನ - 486     
 
ಎದೆ ಬಿರಿವನ್ನಕ್ಕ, ಮನ ದಣಿವನ್ನಕ್ಕ, ನಾಲಿಗೆ ನಲಿನಲಿದಾಡುವನ್ನಕ್ಕ ನಿಮ್ಮ ನಾಮಾಮೃತವ ತಂದೆರೆಸು ಕಂಡಯ್ಯಾ, ಎನಗೆನ್ನ ತಂದೇ. ಬಿರಿಮುಗುಳಂದದಿ ಎನ್ನ ಹೃದಯ ನಿಮ್ಮ ಶ್ರೀಚರಣದ ಮೇಲೆ ಬಿದ್ದರಳುಗೆ, ಕೂಡಲಸಂಗಮದೇವಾ.