ಬಸವಣ್ಣ   
  ವಚನ - 509     
 
ಅಯ್ಯಾ, ನಿಮ್ಮ ಅನುಭಾವದಿಂದ ಎನ್ನ ತನು ಹಾಳಾಯಿತ್ತಯ್ಯಾ! ಅಯ್ಯಾ, ನಿಮ್ಮ ಅನುಭಾವದಿಂದ ಎನ್ನ ಮನ ಹಾಳಾಯಿತ್ತಯ್ಯಾ! ಅಯ್ಯಾ, ನಿಮ್ಮ ಅನುಭಾವದಿಂದ ಎನ್ನ ಕರ್ಮಛೇದನವಾಯಿತ್ತು! ನಿಮ್ಮವರು ಹೇಳಿ ಅಡಿಗಡಿಗೆ ಭಕ್ತಿಯೆಂಬ ಒಡವೆಯ ದಿಟಮಾಡಿ ತೋರಿದರು ಕಾಣಾ, ಕೂಡಲಸಂಗಮದೇವಾ.