ಬಸವಣ್ಣ   
  ವಚನ - 526     
 
ಭಕ್ತಿಯೆಂಬ ಪೃಥ್ವಿಯ ಮೇಲೆ, ಗುರುವೆಂಬ ಬೀಜವಂಕುರಿಸಿ, ಲಿಂಗವೆಂಬ ಎಲೆಯಾಯಿತ್ತು. ಲಿಂಗವೆಂಬ ಎಲೆಯ ಮೇಲೆ ವಿಚಾರವೆಂಬ ಹೂವಾಯಿತ್ತು, ಆಚಾರವೆಂಬ ಕಾಯಾಯಿತ್ತು. ನಿಷ್ಪತ್ತಿಯೆಂಬ ಹಣ್ಣಾಯಿತ್ತು. ನಿಷ್ಪತ್ತಿಯೆಂಬ ಹಣ್ಣು ತೊಟ್ಟು ಬಿಟ್ಟು ಕಳಚಿ ಬೀಳುವಲ್ಲಿ ಕೂಡಲಸಂಗಮದೇವ ತನಗೆ ಬೇಕೆಂದು ಎತ್ತಿಕೊಂಡ!