ಬಸವಣ್ಣ   
  ವಚನ - 535     
 
ರುದ್ರ ಮುಖದಲ್ಲಿ, ವಿಷ್ಣು ಭುಜದಲ್ಲಿ, ಜಂಘೆಯಲ್ಲಿ ಅಜ ಜನನವು! ಇಂದ್ರ ಪಾದದಲ್ಲಿ, ಚಂದ್ರ ಮನದಲ್ಲಿ, ಚಕ್ಷುವಿನಲ್ಲಿ ಸೂರ್ಯ ಜನನವು! ಮುಖದಲ್ಲಿ ಅಗ್ನಿಯು, ಪ್ರಾಣದಲ್ಲಿ ವಾಯು, ನಾಭಿಯಲ್ಲಿ ಅಂತರಿಕ್ಷವು. ಶಿರದಲುದಯ ತೆತ್ತೀಸಕೋಟಿ ದೇವತೆಗಳು, ಪಾದತಳದಲ್ಲಿ ಭೂಮಿ ಜನನವು! ಶ್ರೋತ್ರದಲ್ಲಿ ದಶದಿಕ್ಕುವೂ! ಜಗವ ನಿಕ್ಷೇಪಿಸಿದ ಕುಕ್ಷಿಯಲ್ಲಿ, ಅಕ್ಷಯನಗಣಿತನು! ಸಾಸಿರ ತಲೆ, ಸಾಸಿರ ಕಣ್ಣು, ಸಾಸಿರ ಕೈ, ಸಾಸಿರ ಪಾದ. ಸಾಸಿರ ಸನ್ನಿಹಿತ ನಮ್ಮ ಕೂಡಲಸಂಗಯ್ಯ!