ಬಸವಣ್ಣ   
  ವಚನ - 549     
 
ನಾರಾಯಣನೆಂಬವನ ಕಾಣೆ, ಗೀರಾಯಣನೆಂಬವನ ಕಾಣೆ! ಬೊಮ್ಮನೆಂಬವನ ಕಾಣೆ, ಗಿಮ್ಮನೆಂಬವನ ಕಾಣೆ! ವಿಷವಟ್ಟಿ ಸುಡುವಲ್ಲಿ, ವೀರಭದ್ರ ಕೊಲುವಲ್ಲಿ ಕೂಡಲಸಂಗಯ್ಯಂಗೆ ಶರಣೆಂದು ಮೊರೆಯಿಟ್ಟರೆಲ್ಲರೂ.