ಬಸವಣ್ಣ   
  ವಚನ - 554     
 
ಅಗಳೂ ಲೋಗರ ಮನೆಯ ಬಾಗಿಲ ಕಾಯ್ದುಕೊಂಡಿಪ್ಪವು, ಕೆಲವು ದೈವಂಗಳು; ಹೋಗೆಂದರೆ ಹೋಗವು ಕೆಲವು ದೈವಂಗಳು; ನಾಯಿಂದಲೂ ಕರಕಷ್ಟ ಕೆಲವು ದೈವಂಗಳು. ಲೋಗರ ಬೇಡಿಕೊಂಡುಂಬ ದೈವಂಗಳು ತಾವೇನ ಕೊಡುವುವು, ಕೂಡಲಸಂಗಮದೇವಾ?