ಬಸವಣ್ಣ   
  ವಚನ - 565     
 
ಗುಡಿಯೊಳಗಿರ್ದು ಗುಡಿಯ ನೇಣ ಕೊಯಿದರೆ, ಗುಡಿಯ ದಡಿ ಬಿದ್ದು ಹಲ್ಲು ಹೋಹುದು, ನೋಡಾ! ಪೊಡವಿಗೀಶ್ವರನ ಗರ್ಭಾಸನದೊಳಗಿರ್ದು ನುಡಿವರು ಮತ್ತೊಂದು ದೈವವುಂಟೆಂದು: ತುಡುಗುಣಿ ನಾಯನು ಹಿಡಿತಂದು ಸಾಕಿದರೆ ತನ್ನೊಡೆಯಂಗೆ ಬಗಳುವಂತೆ ಕಾಣಾ, ಕೂಡಲಸಂಗಮದೇವಾ!