ಬಸವಣ್ಣ   
  ವಚನ - 570     
 
ಬ್ರಾಹ್ಮಣನೆ ದೈವವೆಂದು ನಂಬಿದ ಕಾರಣ ಗೌತಮಮುನಿಗೆ ಗೋವಧೆಯಾಯಿತ್ತು. ಬ್ರಾಹ್ಮಣನೆ ದೈವವೆಂದು ನಂಬಿದ ಕಾರಣ ಬಲಿಗೆ ಬಂಧನವಾಯಿತ್ತು. ಬ್ರಾಹ್ಮಣನೆ ದೈವವೆಂದು ನಂಬಿದ ಕಾರಣ ಕರ್ಣನ ಕವಚ ಹೋಯಿತ್ತು. ಬ್ರಾಹ್ಮಣನೆ ದೈವವೆಂದು ನಂಬಿದ ಕಾರಣ ದಕ್ಷಂಗೆ ಕುರಿದಲೆಯಾಯಿತ್ತು. ಬ್ರಾಹ್ಮಣನೆ ದೈವವೆಂದು ನಂಬಿದ ಕಾರಣ ಪರಶುರಾಮನು ಸಮುದ್ರಕ್ಕೆ ಗುರಿಯಾದನು. ಬ್ರಾಹ್ಮಣನೆ ದೈವವೆಂದು ನಂಬಿದ ಕಾರಣ ನಾಗಾರ್ಜುನನ ತಲೆ ಹೋಯಿತ್ತು. ದೇವಾ ಭಕ್ತನೆಂದು ನಂಬಿದ ಕಾರಣ ನಮ್ಮ ಕೂಡಲಸಂಗನ ಶರಣರು ಕೈಲಾಸವಾಸಿಗಳಾದರು.