ಬಸವಣ್ಣ   
  ವಚನ - 580     
 
ನೀರ ಕಂಡಲ್ಲಿ ಮುಳುಗುವರಯ್ಯಾ, ಮರನ ಕಂಡಲ್ಲಿ ಸುತ್ತುವರಯ್ಯಾ! ಬತ್ತುವ ಜಲವನೊಣಗುವ ಮರನ ಮಚ್ಚಿದವರು ನಿಮ್ಮನೆತ್ತ ಬಲ್ಲರು ಕೂಡಲಸಂಗಮದೇವಾ?