ಬಸವಣ್ಣ   
  ವಚನ - 589     
 
ವ್ಯಾಸ ಬೋಯಿತಿಯ ಮಗ, ಮಾರ್ಕಂಡೇಯ ಮಾತಂಗಿಯ ಮಗ, ಮಂಡೋದರಿ ಕಪ್ಪೆಯ ಮಗಳು! ಕುಲವನರಸದಿರಿಂ ಭೋ,ಕುಲದಿಂದ ಮುನ್ನೇನಾದಿರಿಂ ಭೋ? ಸಾಕ್ಷಾತ್ ಅಗಸ್ತ್ಯ ಕಬ್ಬಿಲು ದುರ್ವಾಸ ಮುಚ್ಚಿಗ, ಕಶ್ಯಪ ಕಮ್ಮಾರ, ಕೌಂಡಿನ್ಯನೆಂಬ ಋಷಿ ಮೂರು ಭುವನವರಿಯೆ ನಾವಿದ ಕಾಣಿಂಭೋ! ನಮ್ಮ ಕೂಡಲಸಂಗನ ವಚನವಿಂತೆಂದುದು: ʼಶ್ವಪಚೋಪಿಯಾದರೇನು, ಶಿವಭಕ್ತನೇ ಕುಲಜನುʼ.