ಬಸವಣ್ಣ   
  ವಚನ - 592     
 
ಹಾರುವನ ಭಕ್ತಿ ಓಡಿನೊಳಗಗೆಯ ಹೊಯಿದಂತೆ: ಕೆಳಯಿಂಕೆ ಬೇರೂರದು, ಮೇಲೆ ಫಲವಾಗದು! ಪ್ರಾಣಲಿಂಗದ ಪ್ರಸಾದವ ಮುಂದಿಟ್ಟುಕೊಂಡು `ಪ್ರಾಣಾಯ ಸ್ವಾಹಾ, ಅಪಾನಾಯ ಸ್ವಾಹಾ, ವ್ಯಾನಾಯ ಸ್ವಾಹಾ, ಉದಾನಾಯ ಸ್ವಾಹಾ, ಸಮಾನಾಯ ಸ್ವಾಹಾ' ಎಂಬ ಕರ್ಮಿಗಳನೇನೆಂಬೆ, ಕೂಡಲಸಂಗಮದೇವಾ?