ಬಸವಣ್ಣ   
  ವಚನ - 594     
 
ಹೊನ್ನ ನೇಗಿಲಲುತ್ತು ಎಕ್ಕೆಯ ಬೀಜವ ಬಿತ್ತುವರೆ? ಕರ್ಪುರದ ಮರನ ಕಡಿದು ಕಳ್ಳಿಗೆ ಬೇಲಿಯನಿಕ್ಕುವರೆ? ಶ್ರೀಗಂಧದ ಮರನ ಕಡಿದು ಬೇವಿಂಗೆ ಅಡೆಯನಿಕ್ಕುವರೆ? ನಮ್ಮ ಕೂಡಲಸಂಗನ ಶರಣರಿಗಲ್ಲದೆ ಬೇರೆ ಇಚ್ಛಾಭೋಜನವನಿಕ್ಕಿದರೆ ಕಿಚ್ಚಿನೊಳಗೆ ಉಚ್ಚೆಯ ಹೊಯಿದು ಹವಿಯ ಬೇಳ್ದಂತಾಯಿತ್ತು.