ಬಸವಣ್ಣ   
  ವಚನ - 620     
 
ಎಲವೊ, ಎಲವೋ ಪಾಪಕರ್ಮವ ಮಾಡಿದವನೇ, ಎಲವೊ, ಎಲವೋ ಬ್ರಹ್ಮಹತ್ಯವ ಮಾಡಿದವನೇ, ಒಮ್ಮೆ ʼಶರಣೆʼನ್ನೆಲವೋ. ಒಮ್ಮೆ ʼಶರಣೆಂದರೆʼ ಪಾಪಕರ್ಮ ಓಡುವವು. ಸರ್ವಪ್ರಾಯಶ್ಚಿತ್ತಕ್ಕೆ ಹೊನ್ನ ಪರ್ವತಂಗಳೈದವು: ಓರ್ವಂಗೆ ಶರಣೆನ್ನು, ನಮ್ಮ ಕೂಡಲಸಂಗಮದೇವಂಗೆ!