ಬಸವಣ್ಣ   
  ವಚನ - 681     
 
ಅರ್ಥಪ್ರಾಣಾಭಿಮಾನವ ಕೊಟ್ಟೆನೆಂಬವರಲ್ಲದೆ ಕೊಟ್ಟ ಭಕ್ತರನಾರನೂ ಕಂಡುದಿಲ್ಲ. ದಾಸ ತನ್ನ ವಸ್ತ್ರವ ಕೊಟ್ಟನಲ್ಲದೆ ತನ್ನ ಕೊಟ್ಟುದಿಲ್ಲ; ಬಲ್ಲಾಳ ತನ್ನ ವಧುವ ಕೊಟ್ಟನಲ್ಲದೆ ತನ್ನ ಕೊಟ್ಟುದಿಲ್ಲ; ಸಿರಿಯಾಳ ತನ್ನ ಮಗನ ಕೊಟ್ಟನಲ್ಲದೆ ತನ್ನ ಕೊಟ್ಟುದಿಲ್ಲ! ಇವೆಲ್ಲ ಹೊರಗಣ ಮಾತು: ಕೂಡಲಸಂಗಮದೇವರಲ್ಲಿ ತನ್ನ ಕೊಟ್ಟ ಸಿಂಧುಮರಾಳ!