ಬಸವಣ್ಣ   
  ವಚನ - 695     
 
ಸುಖ ಬಂದರೆ ಪುಣ್ಯದ ಫಲವೆನ್ನೆನು, ದುಃಖ ಬಂದರೆ ಪಾಪದ ಫಲವೆನ್ನೆನು; ನೀ ಮಾಡಿದೊಡಾಯಿತ್ತೆಂದೆನ್ನೆನು, ಕರ್ಮಕ್ಕೆ ಕರ್ತುವೆ ಕಡೆಯೆಂದೆನ್ನೆನು, ಉದಾಸೀನವಿಡಿದು ಶರಣೆನ್ನೆನು. ಕೂಡಲಸಂಗಮದೇವಾ, ನೀ ಮಾಡಿದುಪದೇಶವು ಎನಗೀ ಪರಿಯಲಿ; ಸಂಸಾರವ ಸವೆಯೆ ಬಳಸುವೆನು.