ಬಸವಣ್ಣ   
  ವಚನ - 708     
 
ತನುವ ಬೇಡಿದಡೀವೆ, ಮನವ ಬೇಡಿದಡೀವೆ, ಧನವ ಬೇಡಿದಡೀವೆ, ಬೇಡು, ಬೇಡೆಲೆ ಹಂದೇ! ಕಣ್ಣ ಬೇಡಿದಡೀವೆ, ತಲೆಯ ಬೇಡಿದಡೀವೆ; ಕೂಡಲಸಂಗಮದೇವಾ, ನಿಮಗಿತ್ತು ಶುದ್ಧನಾಗಿಪ್ಪೆ ನಿಮ್ಮ ಪುರಾತರ ಮನೆಯಲ್ಲಿ.