ಬಸವಣ್ಣ   
  ವಚನ - 709     
 
ನಾನು ಆರಂಭವ ಮಾಡುವೆನಯ್ಯಾ ಗುರುಪೂಜೆಗೆಂದು, ನಾನು ಬೆವಹಾರವ ಮಾಡುವೆನಯ್ಯಾ, ಲಿಂಗಾರ್ಚನೆಗೆಂದು, ನಾನು ಪರಸೇವೆಯ ಮಾಡುವೆನಯ್ಯಾ, ಜಂಗಮದಾಸೋಹಕ್ಕೆಂದು; ನಾನಾವಾವ ಕರ್ಮಂಗಳ ಮಾಡಿದರೆಯೂ ಆ ಕರ್ಮಫಲಭೋಗವ ನೀ ಕೊಡುವೆಯೆಂಬುದ ನಾನು ಬಲ್ಲೆನು, ನೀ ಕೊಟ್ಟ ದ್ರವ್ಯವ ನಿಮಗಲ್ಲದೆ ಮತ್ತೊಂದ ಕ್ರೀಯ ಮಾಡೆನು; ನಿಮ್ಮ ಸೊಮ್ಮಿಂಗೆ ಸಲಿಸುವೆನು, ನಿಮ್ಮಾಣೆ ಕೂಡಲಸಂಗಮದೇವಾ.