ಬಸವಣ್ಣ   
  ವಚನ - 712     
 
ಒಲ್ಲೆನಯ್ಯಾ, ಒಲ್ಲೆನಯ್ಯಾ, ನಿಮ್ಮವರಲ್ಲದವರ, ಒಲ್ಲೆನಯ್ಯಾ, ಒಲ್ಲೆನಯ್ಯಾ, ಜಗವೆಲ್ಲವರಿಯಲಿಕೆ, ಒಲ್ಲೆನಯ್ಯಾ, ಒಲ್ಲೆನಯ್ಯಾ, ನೀ ಮುನಿದರೆ ಮುನಿ, ಕೂಡಲಸಂಗಮದೇವಾ, ನಿಮ್ಮಾಣೆ, ನಿಮ್ಮ ಪ್ರಮಥರಾಣೆ!