ಬಸವಣ್ಣ   
  ವಚನ - 715     
 
ಒಡೆಯರಿಲ್ಲದ ಮನೆಯ ತುಡುಗುಣಿ ನಾಯಿ ಹೊಗುವಂತೆ ನೀವಿಲ್ಲದವರ ಮನೆಯ ಹೊಗೆನು, ಸಂಗಯ್ಯಾ. ಶ್ವಪಚೋಪಿಗಳಾಗಲಿ, ಕೂಡಲಸಂಗಯ್ಯಾ, ನೀವಿದ್ದವನೇ ಕುಲಜನು.