ಬಸವಣ್ಣ   
  ವಚನ - 716     
 
ಹೊನ್ನು ಹೆಣ್ಣು ಮಣ್ಣೆಂಬ ಕರ್ಮದ ಬಲೆಯಲ್ಲಿ ಸಿಲುಕಿ ವೃಥಾಯ ಬರುದೊರೆ ಹೋಹ ಕೆಡುಕ ಹಾರುವ ನಾನಲ್ಲ! ಹಾರುವೆನಯ್ಯಾ ಭಕ್ತರ ಬರವ ಗುಡಿಗಟ್ಟಿ, ಹಾರುವೆನಯ್ಯಾ ಶರಣರ ಬರವ ಗುಡಿಗಟ್ಟಿ, ಕೂಡಲಸಂಗಮದೇವನು ವಿಪ್ರಕರ್ಮವ ಬಿಡಿಸಿ, ಅಶುದ್ಧನ ಶುದ್ಧನ ಮಾಡಿದನಾಗಿ!