ಬಸವಣ್ಣ   
  ವಚನ - 730     
 
ನೀನಿರಿಸಿದ ಮನದಲ್ಲಿ ನಾನಂಜೆನಯ್ಯಾ: ಮನವು ಮಹಾಘನಕ್ಕೆ ಶರಣಾಗತಿವೊಕ್ಕುದಾಗಿ. ನೀನಿರಿಸಿದ ಧನದಲ್ಲಿ ನಾನಂಜೆನಯ್ಯಾ: ಧನವು ಸತಿಸುತ ಮಾತಾಪಿತರಿಗೆ ಹೋಗದಾಗಿ. ನೀನಿರಿಸಿದ ತನುವಿನಲ್ಲಿ ನಾನಂಜೆನಯ್ಯಾ: ತನುವು ಸರ್ವಾರ್ಪಿತದಲ್ಲಿ ನಿಯತಪ್ರಸಾದಭೋಗಿಯಾಗಿ. ಇದು ಕಾರಣ, ವೀರಧೀರಸಮಗ್ರಾಹಕನಾಗಿ, ನಿಮಗಾನಂಜೆ, ಕೂಡಲಸಂಗಮದೇವಾ!