ಬಸವಣ್ಣ   
  ವಚನ - 757     
 
ಕಂಡುದಕ್ಕೆಳಸೆನೆನ್ನ ಮನದಲ್ಲಿ, ನೋಡಿ ಸೋಲೆನೆನ್ನ ಕಣ್ಗಳಲ್ಲಿ, ಆಡಿ ಹುಸಿಯೆನೆನ್ನ ಜಿಹ್ವೆಯಲ್ಲಿ. ಕೂಡಲಸಂಗಮದೇವಾ, ನಿಮ್ಮ ಶರಣನ ಪರಿ ಇಂತುಟಯ್ಯಾ.